Posts

Showing posts from May, 2019

ಲಗಾಮಿಲ್ಲದ ಈ ಕುದುರೆ ಸವಾರಿಯಲ್ಲಿ ಬಿಜೆಪಿ ಉರುಳಲೂಬಹುದು, ಉಳಿಯಲೂಬಹುದು!

Image
ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿಯನ್ನು ಮತ್ತೆ ಹಿಡಿಯಬಹುದೆಂಬ ನಿರೀಕ್ಷೆ ಇತ್ತಾದರೂ ಕಳೆದ ಬಾರಿಗಿಂತಲೂ ದೊಡ್ಡ ಮಟ್ಟದ ಗೆಲುವು ಸಿಕ್ಕಿರುವುದು ಬಿಜೆಪಿಗರಿಗೂ ಅಚ್ಚರಿ ತಂದಿರಬಹುದು. ಕರ್ನಾಟಕದಲ್ಲಂತೂ ಪಕ್ಷದ ಮುಖಂಡರೇ ನಿಬ್ಬೆರಗಾಗುವ ಫಲಿತಾಂಶ ಸಿಕ್ಕಿದೆ. ಆದರೆ, ಬಿಜೆಪಿಯ ಪ್ರಚಂಡ ಗೆಲುವು ಹಾಗೂ ಮೈತ್ರಿ ಪಕ್ಷಗಳ ಹೀನಾಯ ಸೋಲನ್ನು ಅವಲೋಕಿಸುವುದಾರೆ, ಉಭಯ ಪಕ್ಷಗಳೂ ನೆನಪಿಡಬೇಕಾದ ಹಲವು ಸಂಗತಿಗಳು ಕಂಡುಬರುತ್ತವೆ. ಬಿಜೆಪಿಯ ಅಭೂತಪೂರ್ವ ಗೆಲುವು ಮೋದಿಯ ಅಭಿಮಾನಿಗಳಿಗೆ ಎಷ್ಟು ಖುಷಿ ಕೊಟ್ಟಿದೆಯೋ, ಅವರ ಟೀಕಾಕಾರರನ್ನು ಅದಕ್ಕಿಂತಲೂ ದೊಡ್ಡ ಮಟ್ಟದ ಸಂಕಟಕ್ಕೆ ಈಡುಮಾಡಿದೆ. ಇದಕ್ಕೆ ಮುಖ್ಯ ಕಾರಣ, ಮೋದಿಯ ಗೆಲುವನ್ನು ಟೀಕಿಸಲು ಮುಂದಾದಾಗ ಎದುರಾಗುವ ಪರ್ಯಾಯದ ಪ್ರಶ್ನೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಮೆರೆದಿತ್ತೋ ಅದೇ ಸ್ಥಿತಿಗೆ ಬಿಜೆಪಿ ಬಂದು ನಿಂತಿದೆ. ಜೊತೆಗೆ, ಅಧಿಕಾರವನ್ನು ಅತ್ಯಂತ ನಾಜೂಕಾಗಿ ಉಳಿಸಿಕೊಳ್ಳಲು ಏನು ಮಾಡಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಂತಿದೆ. ಜನರು ಏನನ್ನು ತಿರಸ್ಕರಿಸುತ್ತಾರೆ ಹಾಗೂ ಏನೇನು ಮಾಡದಿದ್ದರೆ ಉಳಿಯಬಹುದು ಎಂಬುದಕ್ಕೆ ಕಾಂಗ್ರೆಸ್ ಪಕ್ಷ ಎದುರಿಸಿದ ಕಷ್ಟಗಳು ಉದಾಹರಣೆಯಂತೆ ಕಣ್ಣ ಮುಂದಿವೆ. ಆದರೆ, ಈಗ ಬಿಜೆಪಿಯ ಮುಂದಿರುವ ಸವಾಲುಗಳೇ ಬೇರೆ. ಅದರಲ್ಲಿ ಪ್ರಮುಖವೆನಿಸುವ ಅಂಶಗಳು; ಪ್ರಬಲ ವಿರೋಧ ಪಕ್ಷವೇ ಇಲ್ಲದ ಸಂ

ಚುನಾವಣೆಯಲ್ಲಿ ದುಡ್ಡು ಹಂಚುವ ವಾಡಿಕೆ: ನಿಜವಾಗಿಯೂ ತಪ್ಪು ಯಾರದ್ದು?

Image
ಕಳೆದ ನಾಲ್ಕೈದು ತಿಂಗಳಿನಿಂದ ದೇಶಾದ್ಯಂತ ಆವರಿಸಿದ್ದ ಲೋಕಸಭಾ ಚುನಾವಣೆಯ ಮೋಡ ಮಳೆಯಾಗುವ ಹಂತಕ್ಕೆ ಬಂದು ನಿಂತಿದೆ. ಮತಪೆಟ್ಟಿಗೆಯ ಒಳಗಿನ ಗುಟ್ಟು ಹೊರಬೀಳಲು ಕ್ಷಣಗಣನೆ ಆರಂಭವಾಗಿದೆ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದಲೂ ವಿವಿಧ ಕಾರಣಗಳಿಗಾಗಿ ಸದ್ದು - ಸುದ್ದಿ ಮಾಡಿದೆ. ರಾಜಕಾರಣಿಗಳು ಪ್ರಚಲಿತ ಸಮಸ್ಯೆ, ಪರಿಹಾರ, ಪರ್ಯಾಯ ವ್ಯವಸ್ಥೆ, ಅಭಿವೃದ್ಧಿ ಕ್ರಮ ಇತ್ಯಾದಿ ಚಿಂತನೆಗಳ ಕುರಿತು ಮಾತನಾಡುವ ಬದಲು ಪರಸ್ಪರ ಜಗಳ, ಟೀಕೆ, ಕೆಸರೆರಚಾಟ ಸೇರಿದಂತೆ ಭಾವನಾತ್ಮಕವಾಗಿ ಜನರನ್ನು ಸೆಳೆಯುವ ಅಲಿಖಿತ ಪರಂಪರೆಯನ್ನು ಕಾಪಾಡಿಕೊಳ್ಳುವಲ್ಲಿಯೇ ಹೆಚ್ಚು ಆಸಕ್ತಿ ತೋರಿಸಿದರು. ಅಷ್ಟೇ ಮಹತ್ವವನ್ನು ತಮ್ಮ ತೋಳ್ಬಲ, ಧನಬಲ ಪ್ರದರ್ಶನದಲ್ಲೂ ತೋರಿಸಿ ಸುದ್ದಿಯಾದರು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಣ, ಹೆಂಡ ಸೇರಿದಂತೆ ವಿವಿಧ ಆಮಿಷಗಳನ್ನೊಡ್ಡಿ ಮತದಾರರನ್ನು ಸೆಳೆಯುವುದು ಇದೇ ಮೊದಲಲ್ಲ. ಬಹುಶಃ ಕೊನೆಯೂ ಅಲ್ಲ. ಆದರೆ, ಇಪ್ಪತ್ತೊಂದನೆಯ ಶತಮಾನದ ಈ ಸಂದರ್ಭದಲ್ಲೂ ಈ ಪದ್ಧತಿ ಚಾಲ್ತಿಯಲ್ಲಿರುವುದು ಮಾತ್ರ ಶೋಚನೀಯ. ಗೆದ್ದು ಪಾರದರ್ಶಕ ಆಡಳಿತಕ್ಕೆ ಕಾರಣರಾಗಬೇಕಾದವರೇ ಅಕ್ರಮಗಳಲ್ಲಿ ಸಕ್ರಿಯರಾಗಿ ಪ್ರಜಾಪ್ರಭುತ್ವ ರಾಷ್ಟ್ರದ ವ್ಯವಸ್ಥೆ ತಳಮಟ್ಟದಲ್ಲೇ ಹದಗೆಡಲು ಕಾರಣರಾಗುವುದು ರಾಷ್ಟ್ರದ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ. ಜನಸಾಮಾನ್ಯರು ಮತದಾನದ ಮೂಲಕ ಅಭ್ಯರ್ಥಿಗಳನ್ನು ಆರಿಸುವಾಗ ಗಮನ ಹರಿಸುವ ವಿಷಯಗ

ನೈತಿಕತೆಯಿಂದ ದೂರ ಸಾಗುತ್ತಿರುವ ಮಾಧ್ಯಮಗಳನ್ನು ಸರಿದಾರಿಗೆ ತರುವುದು ಹೇಗೆ?

Image
ಕಾಲ ನಿಂತ ನೀರಲ್ಲ. ಪ್ರತಿಯೊಂದು ಕ್ಷೇತ್ರವೂ ಸದಾ ಬದಲಾವಣೆಗೆ ಒಗ್ಗಿಕೊಳ್ಳುತ್ತಲೇ ಮುಂದೆ ಸಾಗುತ್ತದೆ. ಇದು ಸಹಜ ಮತ್ತು ಅನಿವಾರ್ಯ. ಪತ್ರಿಕೋದ್ಯಮ / ಪತ್ರಿಕಾ ರಂಗ ಕೂಡ ಇದಕ್ಕೆ ಹೊರತಲ್ಲ. ದಶಕಗಳ ಹಿಂದಿನ ಪತ್ರಿಕೋದ್ಯಮಕ್ಕೂ ಈಗಿನದ್ದಕ್ಕೂ ತುಲನೆ ಮಾಡಿದರೆ ಅಗಾಧ ವ್ಯತ್ಯಾಸವನ್ನು ನಿರಾಯಾಸವಾಗಿ ಗುರುತಿಸಬಹುದು. ಹಿಂದೆ ಪತ್ರಕರ್ತರನ್ನ ಸಮಾಜ ಕಾಣುವ ಬಗೆ ವಿಭಿನ್ನವಾಗಿತ್ತು. ಪತ್ರಕರ್ತರೆಂದರೆ ಕಡಿಮೆ ಹಣ ಸಂಪಾದಿಸುವವರು / ಕಡಿಮೆ ಆದಾಯ ಗಳಿಸುವವರು ಎಂಬ ಕಾರಣಕ್ಕೆ ಅವರಿಗೆ ಹೆಣ್ಣು ಕೊಡಲೂ ಹಿಂದೆ ಮುಂದೆ ನೋಡುತ್ತಿದ್ದರಂತೆ ಮತ್ತು ಹಲವು ಪತ್ರಕರ್ತರು ಇವನ್ನೆಲ್ಲಾ ಅನುಭವಿಸಿದ್ದೂ ಸತ್ಯ. ಆದರೆ, ಅದೆಲ್ಲವನ್ನೂ ಹೊರತುಪಡಿಸಿ ಅಂದಿನ ಪತ್ರಕರ್ತರನ್ನು ಸಮಾಜ ಗೌರವ ಪೂರ್ವಕವಾಗಿ, ನಂಬಿಕಸ್ಥರನ್ನಾಗಿ ಕಾಣುತ್ತಿದ್ದ ಬಗೆ ಗಮನಿಸಿದರೆ ಬಹುತೇಕ ಪತ್ರಕರ್ತರು ಹಣದ ವಿಚಾರದಲ್ಲಿ ಬಡವರಾಗಿದ್ದರೂ, ನೈತಿಕತೆ ಅಥವಾ ವ್ಯಕ್ತಿತ್ವದ ವಿಚಾರದಲ್ಲಿ ಶ್ರೀಮಂತರಾಗಿದ್ದರು ಮತ್ತು ಪತ್ರಿಕೋದ್ಯಮ ಕ್ಷೇತ್ರದ ಘನತೆ, ಗಾಂಭೀರ್ಯವನ್ನು ಪ್ರಜ್ಞಾವಂತಿಕೆಯಿಂದ ಉಳಿಸಿಕೊಂಡು ಬಂದಿದ್ದರು ಎನ್ನಬಹುದು. ಆದರೆ, ಕಾಲಚಕ್ರ ಪತ್ರಕರ್ತರಿಗೆ ವಿನಾಯಿತಿ ನೀಡಬೇಕಲ್ಲಾ? ಬದಲಾವಣೆಯ ಸುಳಿಗೆ ಸಿಕ್ಕ ಪತ್ರಿಕೋದ್ಯಮ ಬೇರೆ ಯಾವ ಕ್ಷೇತ್ರಗಳಿಗೂ ಕಡಿಮೆಯಿಲ್ಲ ಎನ್ನುವಂತೆ ಬೆಳೆದಿದೆ. ನೋಡನೋಡುತ್ತಲೇ ಉದ್ಯಮವಾಗಿ ಬೆಳೆದು ನಿಂತು, ಪತ್ರಕರ್ತರೂ ಇತರೆ ಕ್ಷೇತ್ರದ ಉದ್ಯೋಗಿ